ಕರಾವಳಿಕ್ರೈಂ

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರಿಗೆ ಗಾಯ

ವಿಟ್ಲ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡು ಇಬ್ಬರು ಮಹಿಳೆಯರು ಗಾಯಗೊಂಡು ಇತರ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.

ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು ಕಾರಿನಲ್ಲಿ ಮೈಸೂರು ಕಡೆಗೆ ತೆರಳುತ್ತಿದ್ದ ವೇಳೆ ಮಳೆಗಾಳಿಗೆ ಹೆದ್ದಾರಿಯ ಬದಿಯಲ್ಲಿದ್ದ ಮರ ಕಾರಿನ ಮೇಲೆ ವಿದ್ಯುತ್ ತಂತಿ ಸಹಿತ ಉರುಳಿ ಬಿದ್ದು ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!