ಹರೀಶ್ ಪೂಂಜಾ ಬಂಧನ ಸಾಧ್ಯತೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಸಿದ್ಧತೆ ನಡೆಸಿದ್ದು, ಗರ್ಡಾಡಿಯ ಅವರ ಮನೆಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಮೇ 22ರಂದು ಪೊಲೀಸರು ಗರ್ಡಾಡಿಯಲ್ಲಿರುವ ಶಾಸಕ ಹರೀಶ್ ಪೂಂಜ ಅವರ ಮನೆಗೆ ಆಗಮಿಸಿದ್ದಾರೆ. ಈ ವೇಳೆ ಕಾರ್ಯಕರ್ತರೂ ಜಮಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರತಿಭಟನೆಯಲ್ಲಿ ಹರೀಶ್ ಪೂಂಜಾ ಅವರು ಪೊಲೀಸರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.