ರಾಜ್ಯ

ಹರೀಶ್ ಪೂಂಜಾ ಬಂಧನ ಸಾಧ್ಯತೆ: ವಿಜಯೇಂದ್ರ ಕಿಡಿ



ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲಾಗದು ಎಂದಿದ್ದಾರೆ. ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ ವಿಚಾರವಾಗಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ. ಅದು ಸರಿ ಅಲ್ಲ ಎಂಬುದು ಪೂಂಜಾರಿಗೂ ಕೂಡ ಗೊತ್ತಾಗಿದೆ. ಹಾಗೆಂದು ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ. ಶಾಸಕರನ್ನು ಅರೆಸ್ಟ್ ಮಾಡುವ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ, ಇಲಾಖೆ ಹೊಣೆ ಆಗಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಶಾಸಕರ ಬಂಧನಕ್ಕೆ ಮುಂದಾಗುವುದನ್ನು ಕೈ ಬಿಡಬೇಕು. ಗೃಹ ಸಚಿವರು ಎಸ್ಪಿ ಜತೆ ಮಾತನಾಡಿ ಸೂಚನೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!