ಕರಾವಳಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ  ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜರ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಆರೋಪಿತರಾದ ಹರೀಶ್ ಪೂಂಜರನ್ನು, ವಿಚಾರಣೆಗಾಗಿ ಠಾಣೆಗೆ ಕರೆತರಲು, ಬೆಳ್ತಂಗಡಿ ಠಾಣಾ ಪೊಲೀಸರು ಹರೀಶ್ ಪೂಂಜಾ ಅವರ ಮನೆಗೆ ತೆರಳಿದ್ದು ಈ ವೇಳೆ ಸ್ಥಳದಲ್ಲಿದ್ದ ಸಂಸದ ನಳಿನ್  ಕುಮಾರ್ ಕಟೀಲ್ ರವರು, ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು.

ಅದರಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹರೀಶ್ ಪೂಂಜಾರನ್ನು ಪೊಲೀಸರೊಂದಿಗೆ ಠಾಣೆಗೆ ಕಳುಹಿಸಿದ್ದು ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!