ರಘುಪತಿ ಭಟ್ ಕಣದಿಂದ ಹಿಂದೆ ಸರಿಯಲು ಗಡುವು ನೀಡಿದ ಸುನಿಲ್ ಕುಮಾರ್
ಮಾಜಿ ಶಾಸಕ ರಘುಪತಿ ಭಟ್ ಅವರು ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿದ್ದು ಬಂಡಾಯದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು ಇಲ್ಲವಾದಲ್ಲಿ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಅವರು ಹೇಳಿದ್ದಾರೆ. ರಘುಪತಿ ಭಟ್ ಅವರು ಬಂಡಾಯದಿಂದ ಹಿಂದೆ ಸರಿಯುತ್ತಾರೆ ಎಂಬ ವಿಶ್ವಾಸವಿದೆ, ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.