ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಜಿ.ಪಂ, ತಾ. ಪಂ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸಿಎಂ
ಮೈಸೂರು: ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಚುನಾವಣೆ ನಡೆಸಲಾಗುವುದು. ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು