ಆರನೇ ಹಂತದ ಲೋಕಸಭಾ ಚುನಾವಣೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ ಚಲಾವಣೆ
ನವದೆಹಲಿ: ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ದೆಹಲಿ ಕ್ಷೇತ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಶನಿವಾರ ತಮ್ಮ ಮತ ಚಲಾಯಿಸಿದರು.

ಡಾ ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದಲ್ಲಿರುವ ಮತಗಟ್ಟೆಗೆ ತಲುಪಿ ಮತ ಚಲಾಯಿಸಿದರು. ನಂತರ ಅವರು ಮತಗಟ್ಟೆಯ ಹೊರಗೆ ಮಾಧ್ಯಮಗಳಿಗೆ ಶಾಯಿ ಗುರುತಿನ ಬೆರಳನ್ನು ತೋರಿಸಿದರು.
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಶನಿವಾರ ನಡೆದ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ನವದೆಹಲಿ ಕ್ಷೇತ್ರದಲ್ಲಿ ಮತ ಚಲಾಯಿಸಿದರು.