ಜಿಲ್ಲೆ

ಕೊಡೆ ಹಿಡಿದು ಬಸ್‌ ಚಾಲನೆ:  ಚಾಲಕ ಹಾಗೂ ನಿರ್ವಾಹಕಿ ಅಮಾನತು

ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ನಿರ್ವಾಹಕಿ ಅಮಾನತಾಗಿದ್ದಾರೆ. ಚಾಲಕ ಹನುಮಂತಪ್ಪ ಕಿಲ್ಲೇದಾರ ಹಾಗೂ ನಿರ್ವಾಹಕಿ ಅನಿತಾ ಎಚ್. ಅಮಾನತಾದವರು. ಬಸ್‌ ಮೇಲ್ಛಾವಣಿ ಸೋರದಿದ್ದರೂ ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕಿಯ ಅಮಾನತಿಗೆ ಕಾರಣವಾಗಿದೆ.

ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್‌ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್‌ನ ವಾಸ್ತವತೆ ಕುರಿತು ವರದಿ ನೀಡಲು ವಿಭಾಗೀಯ ತಾಂತ್ರಿಕರಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್‌ ಮೇಲ್ಛಾವಣಿ ಸೋರುತ್ತಿರಲಿಲ್ಲ ಎನ್ನುವ ಪರಿಶೀಲನಾ ವರದಿ ಸಲ್ಲಿಸಿದ್ದರು.

ಚಾಲಕನನ್ನು ಕರೆಸಿ ವಿಚಾರಿಸಿದಾಗ ಮನರಂಜನೆಗಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಮಸ್ಯೆ ತೋರಿಸುವುದಕ್ಕಿಂತ ಹೆಚ್ಚಾಗಿ ಸಂಸ್ಥೆಯ ಮಾನ ಹರಾಜು ಹಾಕುವ ದುರುದ್ದೇಶ ಅಡಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.ಇದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ( ನಡತೆ ಮತ್ತು ಶಿಸ್ತು) ನಿಬಂಧನೆಗಳು-1971 ರ 18ನೆ ನಿಬಂಧನೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತೆ ಎಂದು ವಿಭಾಗಿಯ ನಿಯಂತ್ರಣಾಧಿಕಾರಿಗಳು ತಿಳಿಸಿರುವುದಲ್ಲದೇ ತತ್ ಕ್ಷಣಕ್ಕೆ ಅನ್ವಯವಾಗುವಂತೆ ಇಬ್ಬರನ್ನೂ ಕರ್ತವ್ಯಲೋಪದ ಆಪಾದನೆ ಮೇರೆಗೆ ಅಮಾನತುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!