ಕರಾವಳಿಕ್ರೈಂ

ವಿಟ್ಲ: ಬೀಗ ಹಾಕಿದ್ದ ಮನೆಗೆ ನುಗ್ಗಿದ ಕಳ್ಳರು

ವಿಟ್ಲ: ವಿದೇಶದಲ್ಲಿರುವ ಮಾಲಿಕರ ಬೀಗ ಹಾಕಿದ ಮನೆಗೆ ಕಳ್ಳರು ನುಗ್ಗಿ ಡಿ.ವಿ.ಆರ್ ಹೊತ್ತೊಯ್ದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ನಡೆದಿದೆ.

ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಜ್ಮನ್ ನಲ್ಲಿದ್ದು, ಆರು ತಿಂಗಳ ಹಿಂದಷ್ಟೇ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ ಸಂಶಯಗೊಂಡಿದ್ದರು. ಮನೆಗೆ ಹೋಗಿ ನೋಡಿದಾಗ ಅಂಗಳದಲ್ಲಿದ್ದ ಸಿ.ಸಿ.ಕ್ಯಾಮರಾದ ದೃಷ್ಟಿ ಬದಲಾಯಿಸಿ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಎ.ಸಿ.ಚಾಲು ಮಾಡಿಯೇ ನಾಲ್ಕು ಕಪಾಟುಗಳನ್ನು ಒಡೆದು ಸೊತ್ತುಗಳಿಗಾಗಿ ಗಂಟೆಗಳ ಕಾಲ ಸಾಕಷ್ಟು ಜಾಲಾಡಿದ್ದಾರೆ.

ಕಪಾಟಿನಲ್ಲಿದ್ದ ಒಂದು ಲಕ್ಷ ರೂಪಾಯಿ ಮೌಲ್ಯದ Rado ವಾಚ್ ಮಾತ್ರ ನಾಪತ್ತೆಯಾಗಿದೆ. ಸೊತ್ತುಗಳಿಗಾಗಿ ಸಾಕಷ್ಟು ಜಾಲಾಡಿದ ಕಳ್ಳರು ಮರಳಿ ಹೋಗುವ ಸಂದರ್ಭ ಡಿ.ವಿ.ಆರ್ ಹೊತ್ತೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!