ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಮೇ.31ರಂದು ಎಸ್ ಐ ಟಿ ಮುಂದೆ ಹಾಜರಾಗುವುದಾಗಿಯು ಹೇಳಿದ್ದಾರೆ.
ಇದೇ ವೇಳೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪತ್ರ, ಕುಮಾರಸ್ವಾಮಿ ಅವರ ಮನವಿಯ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ, ತಂದೆ-ತಾಯಿ, ತಾತನಿಗೆ ಕ್ಷಮೆಕೋರುತ್ತೇನೆ, ಜನತೆ, ಜೆಡಿಎಸ್ ಕಾರ್ಯಕರ್ತರಿಗೂ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.