ಮೇ.31: ರೆಂಜಲಾಡಿ ಇಸ್ಲಾಮಿಕ್ ಸೆಂಟರ್‌ನ ನೂತನ ಕಟ್ಟಡದ ಉದ್ಘಾಟನೆ
ಪುತ್ತೂರು: ಧಾರ್ಮಿಕ, ಲೌಕಿಕ ಸಮನ್ವಯ ಶಿಕ್ಷಣ ನೀಡುವ ಉದ್ದೇಶಕ್ಕೆ ಸರ್ವೆ ಗ್ರಾಮದ ರೆಂಜಲಾಡಿಯಲ್ಲಿ ನಿರ್ಮಾಣಗೊಂಡ ರೆಂಜಲಾಡಿ ಇಸ್ಲಾಮಿಕ್ ಸೆಂಟರ್‌ನ ನೂತನ ಕಟ್ಟಡದ ಉದ್ಘಾಟನೆ ಮೇ.31ರಂದು ಸಂಜೆ ನಡೆಯಲಿದೆ.
ಬೆಳಿಗ್ಗೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮವನ್ನು ರೆಂಜಲಾಡಿ ಮಸೀದಿಯ ಅಧ್ಯಕ್ಷ ಆ.ಎಂ ಅಲಿ ಹಾಜಿ ನಿರ್ವಹಿಸಲಿದ್ದಾರೆ. ಸಂಜೆ ನಡೆಯುವ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ವಹಿಸಲಿದ್ದು ಎನ್‌ಪಿಎಂ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ ಉದ್ಘಾಟಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೆಂಜಲಾಡಿ ಇಸ್ಲಾಮಿಕ್ ಸೆಂಟರ್‌ನ ಮುಖ್ಯಸ್ಥರಾದ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ತಿಳಿಸಿದ್ದಾರೆ.