ರಾಜ್ಯ

ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅಶ್ಲೀಲ ವಿಡಿಯೋ ವಿವಾದದ ಬಳಿಕ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮಿನಿಯಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮೇ 31ರಂದು ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲದೆ ಮೇ 31ರ ಬೆಳಗ್ಗೆ 10:30ಕ್ಕೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಆದರೆ ಪ್ರಜ್ವಲ್​ ರೇವಣ್ಣ ಟಿಕೆಟ್ ಬುಕ್ ಮಾಡಿರುವ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 31ರ ಮಧ್ಯರಾತ್ರಿ 12:30ಕ್ಕೆ ಆಗಮಿಸಲಿರುವುದರಿಂದ ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!