ಬೈತಡ್ಕ: ಬೊಲೆರೊ-ಕಾರು ಅಪಘಾತ, ಕಾರಿನಲ್ಲಿದ್ದ ನಾಲ್ವರು ಆಸ್ಪತ್ರೆಗೆ ದಾಖಲು
ಬೊಲೆರೊ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಬೈತಡ್ಕದಲ್ಲಿ ಮೇ.29ರಂದು ಮಧ್ಯಾಹ್ನ ನಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೊಲೆರೋ ಹಾಗೂ ಪುತ್ತೂರಿನಿಂದ ಮಡಿಕೇರಿಗೆ ಹೋಗುತ್ತಿದ್ದ ಕಾರು ಬೈತಡ್ಕ ತಿರುವಿನಲ್ಲಿ ಪರಸ್ಪರ ಢಿಕ್ಕಿ ಹೊಡೆದಿದ್ದು, ಈ ವೇಳೆ ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿರುವುದಾಗಿ ತಿಳಿದುಬಂದಿದೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.