ಪಾಪೆಮಜಲು ಪ್ರೌಢ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಆಯ್ದ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ
ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ ಮೇ.31ರಂದು ನಡೆಯಿತು. ಶಾಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆರವಣಿಗೆಯ ಮೂಲಕ ವಿಧ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ನಿವೃತ್ತ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಗೌಡ ಉದ್ಘಾಟಿಸಿದರು. ಸರಕಾರದಿಂದ ಉಚಿತವಾಗಿ ನೀಡಲಾಗುವ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವನ್ನು ವಿತರಿಸಿದರು.
ಸಭಾಧ್ಯಕ್ಷತೆ ವಹಿಸಿದ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೈನ್ ಕೌಡಿಚ್ಚಾರ್ ರವರ ನೇತೃತ್ವದಲ್ಲಿ ದಾನಿಗಳಿಂದ ಸಂಗ್ರಹಿಸಿದ ಮೊತ್ತದಲ್ಲಿ ಆಯ್ದ 21 ವಿದ್ಯಾರ್ಥಿಗಳಿಗೆ ಕೊಡೆ ಮತ್ತು ನೋಟ್ಸ್ ಪುಸ್ತಕಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸದಸ್ಯರಾದ ಸೀತಾರಾಮ, ವೆಂಕಪ್ಪ ನಾಯ್ಕ, ಸುಮಯ್ಯ,ಲೀಲಾವತಿ, ಭಾಗಿರಥಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು, ಶಾಲಾ ಶಿಕ್ಷಕಿ ಸವಿತಾ ಪಿ ಮತ್ತು ಪ್ರವೀಣಾ ರೈ ಯವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಶಿಕ್ಷಕ್ಷಿ ಪೂರ್ಣಿಮಾ ಶೆಟ್ಟಿ ವಂದಿಸಿದರು.