ಇಂಡಿಯಾ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ-ಖರ್ಗೆ
ಹೊಸದಿಲ್ಲಿ: ಇಂಡಿಯಾ ಮೈತ್ರಿಕೂಟದ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಜೂ.1ರಂದು ಮಹತ್ವದ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಇಂಡಿಯಾ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ” ನಾವು ಒಗ್ಗಟ್ಟಾಗಿದ್ದೇವೆ ಮತ್ತು ನಾವು ಒಗ್ಗಟ್ಟಿನಿಂದ ಇರುತ್ತೇವೆ, ನಮ್ಮನ್ನು ವಿಭಜಿಸಲು ಪ್ರಯತ್ನಿಸಬೇಡಿ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಾತನಾಡಿ”ಉತ್ತರ ಪ್ರದೇಶದಲ್ಲಿ, ಬಿಜೆಪಿ ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಎಂದರು. ಶಿವಸೇನಾ ನಾಯಕ ಅನಿಲ್ ದೇಸಾಯಿ ಮಾತನಾಡಿ ‘ನಾವು ಮಹಾರಾಷ್ಟ್ರದಿಂದ 30-35 ಸ್ಥಾನಗಳನ್ನು ಪಡೆಯುತ್ತೇವೆ’ ಎಂದರು.