ಚುನಾವಣೋತ್ತರ ಸಮೀಕ್ಷೆ: ಡಿಕೆ ಶಿವಕುಮಾರ್ ಹೇಳಿದ್ದೇನು..?
ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಎಕ್ಸಿಟ್ ಪೋಲ್ ಸಮೀಕ್ಷೆಗಳು ಹೊರ ಬರುತ್ತಿವೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ ಎಂದಿದ್ದಾರೆ. ನಾನು ಮೊದಲೇ ಹೇಳೀದ್ದೇನೆ. ಯಾವುದೇ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ. ಕರ್ನಾಟಕದಲ್ಲಿ ನಾವು ಎರಡಂಕಿ ದಾಟುತ್ತೇವೆ ಎಂದು ಹೇಳಿದ್ದಾರೆ. ಆ ಮೂಲಕ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಡಿಕೆಶಿ ವ್ಯಕ್ತಪಡಿಸಿದ್ದಾರೆ.