ರಾಷ್ಟ್ರೀಯ

ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ಭವ್ಯ ನರಸಿಂಹ ಮೂರ್ತಿ

ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿಯವರು ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ, ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ನಿಯೋಜನೆಗೊಂಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಭವ್ಯ ನರಸಿಂಹಮೂರ್ತಿ, ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದೇನೆ. ಇನ್ನು ಮುಂದಕ್ಕೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಮಾಡುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶ ಕರೆದಾಗ ಗಡಿಯಲ್ಲಿ ದೇಶದ ರಕ್ಷಣೆ ಮಾಡಲೂ ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ.

    Leave a Reply

    Your email address will not be published. Required fields are marked *

    error: Content is protected !!