ಉಜಿರೆ: ಯುವಕನಿಗೆ ಹಲ್ಲೆ, ಜಾತಿ ನಿಂದನೆ- ಪ್ರಕರಣ ದಾಖಲು
ಬೆಳ್ತಂಗಡಿ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (21.ವ) ಆಸ್ಪತ್ರೆಗೆ ದಾಖಲಾಗಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ವಥ್ ರವರು ಜೂ.2ರಂದು ಉಜಿರೆ ಗ್ರಾಮದ ಮೇಲಿನ ಮಾಚಾರು ಎಂಬಲ್ಲಿರುವಾಗ ಕರುಣಾಕರ ಗೌಡ, ನಿತಿನ್ ಮತ್ತು ಹಾಗೂ ಇನ್ನೊಬ್ಬ ವ್ಯಕ್ತಿ ಬಂದಿದ್ದು ಅವರಲ್ಲಿ ಕರುಣಾಕರ ಗೌಡ ಎಂಬವರು ಅಶ್ವಥ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅಶ್ವತ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.