ಉತ್ತರ ಪ್ರದೇಶದಲ್ಲಿ ಪುಟಿದೆದ್ದ ಇಂಡಿಯಾ ಒಕ್ಕೂಟ..!
ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಉತ್ತರ ಪ್ರದೇಶದಲ್ಲಿ ಇಂಡಿಯಾ ಒಕ್ಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. 80 ಲೋಕಸಭಾ ಕ್ಷೇತ್ರಗಳ ಪೈಕಿ 42 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ ಸಾಧಿಸಿದ್ದು 37 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆಯಲ್ಲಿದೆ. ಒಂದು ಕ್ಷೇತ್ರದಲ್ಲಿ ಇತರರು ಮುನ್ನಡೆಯಲ್ಲಿದ್ದಾರೆ. ಬಿಜೆಪಿಯ ಭದ್ರಕೋಟೆ ಎಂದೇ ಕರೆಸಿಕೊಳ್ಳುತ್ತಿದ್ದ ಉತ್ತರ ಪ್ರದೇಶದಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿದೆ