ದಕ: ಗೆಲುವಿನ ನಗೆ ಬೀರಿದ ಚೌಟ

ಮಂಗಳೂರು: ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪಾರಮ್ಯ ಮೆರೆದಿದೆ.ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.