ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದರು. ನಿನ್ನೆ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ನಿನ್ನೆ ರಾತ್ರಿ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಕಿಡಿಗೇಡಿಗಳು ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ.ಸುಧಾಕರ್ ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದು ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಕೂಡಾ ಎದ್ದಿವೆ.