ಸರ್ವೆ, ಮುಂಡೂರಿನಲ್ಲಿ ಬಿಜೆಪಿ ವಿಜಯೋತ್ಸವ
ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಎನ್.ಡಿ.ಎ ಬಹುಮತ ಸಾಧಿಸಿದ್ದು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ
ಮುಂಡೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ಅದೇ ರೀತಿ ಸರ್ವೆ ಗ್ರಾಮದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಗ್ರಾಮದ ಹಲವಾರು ಮಂದಿ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.
