ರಾಷ್ಟ್ರ ರಾಜಕಾರಣದಲ್ಲಿ ಮಿಂಚಲಿರುವ ಪ್ರಿಯಾಂಕಾ ಜಾರಕಿಹೊಳಿ
ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಕಮಾಲ್ ಮಾಡಿದ್ದಾರೆ. ಆ ಮೂಲಕ ಚಿಕ್ಕ ವಯಸ್ಸಿನಲ್ಲೇ ಸಂಸತ್ತು ಪ್ರವೇಶಿಸಿದ ಕೀರ್ತಿಗೂ ಪಾತ್ರರಾಗಿದ್ದಾರೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಭಾರತದಲ್ಲಿ ಅತಿ ಕಿರಿಯ ಸಂಸದೆ ಎಂಬ ಕೀರ್ತಿಯನ್ನು ತಮ್ಮದಾಗಿಸಿಕೊಂಡಿರುವ ಪ್ರಿಯಾಂಕಾ ಜಾರಕಿಹೊಳಿ ಕುಟುಂಬದ ಮೂರನೇ ತಲೆಮಾರು ರಾಷ್ಟ್ರ ರಾಜಕಾರಣದಲ್ಲಿ ಸದ್ದು ಮಾಡಲಿದೆ.
ಕೇವಲ 27ನೇ ವಯಸ್ಸಿನಲ್ಲಿ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ಸೋಲಿಸಿ ನೂತನ ಸಂಸದೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಎಂಬಿಎ ಪದವಿಧರೆ. ಎಂಬಿಎ ವಿದ್ಯಾಭ್ಯಾಸದ ಮೂಲಕ ಅವರು ವ್ಯವಹಾರ ಚತುರತೆಯನ್ನೂ ಬೆಳೆಸಿಕೊಂಡಿದ್ದಾರೆ. ಇದೀಗ ಕಿರಿಯ ವಯಸ್ಸಿನಲ್ಲೇ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಅವರಿಗೆ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.