ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಹಾಗೂ ತಮ್ಮ ಸಚಿವ ಸಂಪುಟದ ರಾಜೀನಾಮೆ ಸಲ್ಲಿಸಿದ್ದಾರೆ.