ದೆಹಲಿಯಲ್ಲಿ ಎನ್‌ಡಿಎ ಸಭೆ: ಮೂರನೇ ಅವಧಿಗೆ ಪ್ರಧಾನಿ ಗದ್ದುಗೆ ಏರಲಿದ್ದಾರೆ ಮೋದಿ
ನವದೆಹಲಿಯಲ್ಲಿ ಬುಧವಾರ ನಡೆದ ಎನ್ ಡಿ ಎ ಸಭೆಯಲ್ಲಿ ಹಿರಿಯ ನಾಯಕರು ಸರ್ಕಾರ ರಚನೆ ಬಗ್ಗೆ ಚರ್ಚಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಬಹುಮತ ಗಳಿಸಿದ ಒಂದು ದಿನದ ನಂತರ ಈ ಸಭೆ ನಡೆದಿದೆ. ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಬಡವರು, ಮಹಿಳೆಯರು, ರೈತರ ಸೇವೆಗೆ ಮೈತ್ರಿ ಸರ್ಕಾರದ ಬದ್ಧತೆಯ ನಿರ್ಣಯವನ್ನು ಎನ್‌ಡಿಎ ನಾಯಕರು ಅಂಗೀಕರಿಸಿದ್ದಾರೆ ಎಂದು ವರದಿಯಾಗಿದೆ. ಮುಂದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ ಎನ್ನಲಾಗುತ್ತಿದೆ.