ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದ ಕಾರು: ಮೂವರು ಸ್ಥಳದಲ್ಲೇ ಸಾವು
ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಗರಗೆರೆ ಸಮೀಪ ನಡೆದಿದೆ.

ಜೂ.6ರಂದು ತಡರಾತ್ರಿ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಶ್ರೀಧರ್, ವೇಣುಗೋಪಾಲ್, ಮಂಜುನಾಥ್ ಎಂದು ಗುರುತಿಸಲಾಗಿದೆ. ಓರ್ವ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ