ಸಂಸದೆ ಕಂಗನಾ ರಣಾವತ್ ಕೆನ್ನೆಗೆ ಹೊಡೆದಿದ್ದ ಭದ್ರತಾ ಪಡೆಯ ಸಿಬ್ಬಂದಿ ಸೇವೆಯಿಂದ ಅಮಾನತು
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಂಸದೆ ಕಂಗನಾ ರಣಾವತ್ ಅವರ ಕೆನ್ನೆಗೆ ಹೊಡೆದಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಪೇದೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಂಗನಾ ರಣಾವತ್, ಚಂಡೀಗಢ ವಿಮಾನ ನಿಲ್ದಾಣದ ಮಾರ್ಗವಾಗಿ ದಿಲ್ಲಿಗೆ ತೆರಳುವ ಸಂದರ್ಭದಲ್ಲಿ ಘಟನೆ ನಡೆದಿತ್ತು. ಕಂಗನಾ ಅವರು ರೈತರಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಭದ್ರತಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದರು.