ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ವಿತರಿಸಿದ ಪದ್ಮರಾಜ್
ಪುತ್ತೂರು: ಕೊಡಿಪ್ಪಾಡಿಗ್ರಾಮದ ಬಟ್ರುಪ್ಪಾಡಿ ನಿವಾಸಿ ದಿ. ಅನಿಲ್ ಪೂಜಾರಿಯವರ ಮಕ್ಕಳ ವಿದ್ಯಾಬ್ಯಾಸಕ್ಕಾಗಿ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್ ಪೂಜಾರಿಯವರು ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು.
ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು, ನೌಶಾದ್ , ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ದಾಮೋದರ ಮುರ, ನಗರ ಸಭಾ ಸದಸ್ಯ ರಿಯಾಝ್ ಪರ್ಲಡ್ಕ, ಶರತ್ ಕೇಫುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ ಕೆ, ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾದ ಚಂದ್ರ ಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.