ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳಿಂದ ಗೆದ್ದ ಟಾಪ್-5 ಸಂಸದರು ಇವರು
ನಾಲ್ವರು ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಐವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಪೈಕಿ ಇಂದೋರ್‌ನ ಬಿಜೆಪಿ ಸಂಸದ ಶಂಕರ್ ಲಾಲ್ವಾನಿ ಅಗ್ರಸ್ಥಾನದಲ್ಲಿದ್ದು, ಅವರು 11.72 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕಿಬುಲ್ ಹುಸೇನ್ ಅತಿಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡ ಅಭ್ಯರ್ಥಿಗಳ ಪೈಕಿ 2ನೇ ಸ್ಥಾನದಲ್ಲಿದ್ದಾರೆ. ಅಸ್ಸಾಂನ ಧುಬ್ರಿ ಕ್ಷೇತ್ರದಲ್ಲಿ ಅವರು 10.12 ಲಕ್ಷ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ವಿದಿಶಾ ಕ್ಷೇತ್ರದಿಂದ 8.21 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ 3ನೇ ಸ್ಥಾನದಲ್ಲಿದ್ದಾರೆ.
ಗುಜರಾತ್‌ನ ನವಸಾರಿ ಕ್ಷೇತ್ರದಲ್ಲಿ 7.73 ಲಕ್ಷ ಮತಗಳ ಅಂತರದಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿ ಸಿ.ಆರ್.ಪಾಟೀಲ್ ಹೆಚ್ಚು ಅಂತರದಿಂದ ಗೆದ್ದ 4ನೇ ಅಭ್ಯರ್ಥಿಯಾಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗುಜರಾತ್‌ನ ಗಾಂಧಿನಗರ ಕ್ಷೇತ್ರದಿಂದ 7.44 ಲಕ್ಕಕ್ಕೂ ಅಧಿಕ ಮತಗಳ ಅಂತರದಿಂದ ಆಯ್ಕೆಯಾಗುವ ಮೂಲಕ ಟಾಪ್ 5ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.