ಪಾಕಿಸ್ತಾನ ಜೊತೆ ಭಾರತ ಕ್ರಿಕೆಟ್ ಆಡಬಾರದು- ಯು.ಟಿ ಖಾದರ್
ಭಾರತ ಪಾಕಿಸ್ತಾನ ನಡುವೆ ಭಾನುವಾರ ಟಿ20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಮಧ್ಯೆ, ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಮಾಧ್ಯಮದ ಜೊತೆ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನದ ಜೊತೆ ನಾವು ಕ್ರಿಕೆಟ್ ಆಟ ಆಡಲೇಬಾರದು ಎಂದಿದ್ದಾರೆ. ನಾನು ಕೂಡಾ ಕ್ರಿಕೆಟ್ ಆಟಗಾರ ಮತ್ತು ಅಭಿಮಾನಿ. ಅದಕ್ಕಿಂತ ಮಿಗಿಲಾಗಿ ನಾನು ಭಾರತ ದೇಶದ ಪ್ರಜೆ ಎಂದಿದ್ದಾರೆ.

ನಾವು ಪಾಕಿಸ್ತಾನದ ಜೊತೆ ಕ್ರಿಕೆಟ್ ಆಟ ಆಡಲೇಬಾರದು. ಪಾಕಿಸ್ತಾನದವರು ಇಲ್ಲಿ ಬಂದಾಗ ವಿರೋಧಿಸಿದ್ದನ್ನು ನೋಡಿದ್ದೇವೆ. ಭಾರತ ದೇಶದಲ್ಲಿ ಅವರ ಜತೆ ಪಂದ್ಯ ನಿಷೇಧ ಮಾಡಲಾಗಿದೆ. ಹಾಗಾದ ಮೇಲೆ ಹೊರದೇಶದಲ್ಲಿ ಅವರ ಜೊತೆ ಯಾಕೆ ಆಟ ಆಡಿಸಬೇಕು ಎಂದು ಪ್ರಶ್ನಿಸಿದ್ದಾರೆ. ಅವರು ಸರಿಯಾಗುವ ತನಕ ಅವರ ಜತೆ ಪಂದ್ಯ ಆಡುವುದೇ ಬೇಡ. ಇದು ನನ್ನ ವೈಯಕ್ತಿಕ ಅನಿಸಿಕೆ ಎಂದ ಖಾದರ್ ನಾಳಿನ ಪಂದ್ಯದಲ್ಲಿ ನಮ್ಮ ತಂಡ ಪಾಕಿಸ್ತಾನ ತಂಡವನ್ನು ಹೀನಾಯವಾಗಿ ಸೋಲಿಸಬೇಕು ಎಂದು ಹೇಳಿದರು.



