ಯು.ಟಿ ಖಾದರ್ ಗೆ ಸಚಿವ ಸ್ಥಾನ?
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗರಂ ಆಗಿದ್ದು ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿಗೆ ನಿನ್ನೆ ಭೇಟಿ ನೀಡಿದ್ದ ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದು ರಾಜ್ಯದ ಫಲಿತಾಂಶದ ಬಗ್ಗೆ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಜೂನ್ 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಯಲ್ಲಿ ನಡೆಯುತ್ತಿರುವ ಎಐಸಿಸಿ ಸಭೆಗೆ ರಾಹುಲ್ ಗಾಂಧಿ ಕರೆಸಿಕೊಂಡಿದ್ದು ರಾಜ್ಯ ಸರಕಾರದ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ ಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹಾಲಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ಬಗ್ಗೆ ಚಿಂತನೆ ನಡೆಸಲಾಗಿದ್ದು ಸ್ಪೀಕರ್ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.