ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಜೂ. 8ರಂದು ನಡೆದಿದೆ.
ಚಿಕ್ಕಮಗಳೂರಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಸರಸ್ವತಿಪುರ ಗೇಟ್ ತಲುಪುತಿದ್ದಂತೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದು ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಕಾರಿನಿಂದ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆ ವೇಳೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು.