ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೇಜಾವರಶ್ರೀಗೆ ಆಹ್ವಾನ
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಇಂದು ಸಂಜೆ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಗುತ್ತಿದೆ.

ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಪೇಜಾವರಶ್ರೀಗಳಿಗೂ ಆಹ್ವಾನ ಸಿಕ್ಕಿದ್ದು ಕೆಂಪೇಗೌಡ ಏರ್ಪೋರ್ಟ್ನಿಂದ ದೆಹಲಿಗೆ ಶ್ರೀಗಳು ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.