ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ
ನರೇಂದ್ರ ಮೋದಿ ಅವರು ಜೂ.9ರಂದು ಸಂಜೆ ದೇಶದ ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ವಿದೇಶಿ ಗಣ್ಯರು ಸೇರಿ 9 ಸಾವಿರಕ್ಕೂ ಹೆಚ್ಚು ಗಣ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.
ಪ್ರಧಾನಿ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಗರಿ ಜೆ.ಪಿ.ನಡ್ಡಾ,ಶಿವರಾಜ್ ಸಿಂಗ್ ಚೌಹಾಣ್ ಅವರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.