ಬೋಳಿಯಾರು: ಇಬ್ಬರಿಗೆ ಚೂರಿ ಇರಿತ ಪ್ರಕರಣ-ಮೂವರು ಪೊಲೀಸ್ ವಶಕ್ಕೆ
ಮಂಗಳೂರು: ಬೋಳಿಯಾರು ಬಳಿ ತಂಡವೊಂದು ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದು ಗಾಯಾಳುಗಳನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೋದಿ ಪದಗ್ರಹಣದ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ವಿಜಯೋತ್ಸವ ಮುಗಿಸಿ ಮನೆಗೆ ಮರಳುವ ಸಂದರ್ಭ ತಂಡವೊಂದು ಇಬ್ಬರನ್ನು ಅಡ್ಡಗಟ್ಟಿ ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಇನೋಳಿ ಧರ್ಮನಗರದ ಹರೀಶ್ ಮತ್ತು ನಂದನ್ ಗಾಯಗೊಂಡವರು. ಗಾಯಾಳುಗಳನ್ನು ದೇರಳಕಟ್ಟೆ ಆಸ್ಪ್ರತೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧ ಪಟ್ಟಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.