ಬೆಳ್ಳಾರೆ: ಮಹಿಳೆಯ ಮೃತದೇಹ ಪತ್ತೆ- ಕೊಲೆ ಶಂಕೆ
ಸುಳ್ಯ: ಬೆಳ್ಳಾರೆ ಪೇಟೆ ಬಳಿ ಜೂ.10ರಂದು ಬೆಳಗ್ಗೆ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಅವರ ಮೃತದೇಹ ಇಂದು ಬೆಳಗ್ಗೆ ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಪತ್ತೆಯಾಗಿದೆ. ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ