ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಲಾಗಿದ್ದು ಕೋರ್ಟ್ ಜೂನ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಜ್ವಲ್ ಅವರನ್ನುಮೇ 31ರಂದು ಐಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಮತ್ತೊಂಡೆದೆ ಎಸ್ಐಟಿ ಅಧಿಕಾರಿಗಳು ಮತ್ತೊಮ್ಮೆ ಪ್ರಜ್ವಲ್ ರೇವಣ್ಣ ಅವರ ಬಸವನಗುಡಿಯ ಮನೆಯಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.