ಕ್ರೈಂರಾಜ್ಯ

ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್



ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಮೈಸೂರಿನ ಫಾರ್ಮ್ಹೌಸ್ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು ಎನ್ನಲಾಗಿದ್ದು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗುತ್ತಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!