ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ಗೃಹ ಸಚಿವರು ಹೇಳಿದ್ದಿಷ್ಟು
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿಚಾರಣೆ ವೇಳೆ ನಟ ದರ್ಶನ್ ಹೆಸರು ಬಂದಿದೆ.
ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ತನಿಖೆ ಆಗುವವರೆಗೂ ಕೂಡ ಏನು ಹೇಳುವುದಕ್ಕೆ ಆಗಲ್ಲ. ನಟ ದರ್ಶನ್ ನೇರವಾಗಿ ಭಾಗಿಯಾಗಿದ್ದಾರಾ, ಇಲ್ಲವೋ? ಯಾವ ಕಾರಣಕ್ಕೆ ಮರ್ಡರ್ ಆಗಿದೆ ಎಂಬ ಕುರಿತು ತನಿಖೆ ನಡೆಯುತ್ತಿದೆ. ನಟ ದರ್ಶನ್ ಹೆಸರು ಏಕೆ ಬಂದಿದೆ ಅಂತ ತನಿಖೆ ಬಳಿಕ ತಿಳಿಯುತ್ತೆ. ಈ ಸಂದರ್ಭದಲ್ಲಿ ಬೇರೆ ಏನು ಹೇಳುವುದಕ್ಕೆ ಸಾಧ್ಯವಿಲ್ಲ. ತನಿಖೆ ಆದ ಮೇಲೆ ಎಲ್ಲವೂ ಗೊತ್ತಾಗುತ್ತೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.