ಪ್ರಕಾಶ್ ಪುರುಷರಕಟ್ಟೆ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ
ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಕಾಶ್ ರವರು ಹೃದಯಾಘಾತದಿಂದ ನಿಧನರಾಗಿದ್ದು ಈ ವಿಚಾರ ತಿಳಿದು ಅತ್ಯಂತ ದು:ಖಿತನಾಗಿದ್ದೇನೆ. ಇವರ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ.

ಓರ್ವ ನಿಷ್ಟಾವಂತ,ಪ್ರಾಮಾಣಿಕ ಕಾರ್ಯಕರ್ತರಾಗಿ ಪಕ್ಷ ಸಂಘಟಿಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ರವರು ಸಮಾಜ ಸೇವೆಯಲ್ಲಿ ತನನ್ನು ತೊಡಗಿಸಿಕೊಂಡವರು. ರಕ್ತದಾನದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮೂಲಕ ಎಲ್ಲರೊಂದಿಗೂ ಉತ್ತಮ ಸಂಬಂಧವನ್ನು ಹೊಂದಿದವರು. ಇವರ ಅಗಲುವಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಪರಮಾತ್ಮನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಎಂದು ಅವರು ಹೇಳಿದ್ದಾರೆ.