ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರು ಮೃತ್ಯು- ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ
ಕುವೈತ್ ನ ಕಟ್ಟಡವೊಂದರಲ್ಲಿ ಅಗ್ನಿ ಅವಘಡದಲ್ಲಿ ಕನಿಷ್ಠ 49 ಜನ ಸಜೀವ ದಹನವಾಗಿದ್ದು, ಇವರಲ್ಲಿ ಬಹುತೇಕರು ಭಾರತೀಯರಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುವೈತ್ ಅಗ್ನಿ ದುರಂತದಲ್ಲಿ ಕನಿಷ್ಠ 40 ಮಂದಿ ಭಾರತೀಯರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅಲ್ಲದೆ ಮೃತ ಭಾರತೀಯ ಪ್ರಜೆಗಳ ಕುಟುಂಬಕ್ಕೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.