ಸೊರಕೆಯಲ್ಲಿ ಕಾಡಾನೆಗಳು ಪ್ರತ್ಯಕ್ಷ
ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿರುವ ಕಾಡಾನೆಗಳು ಇದೀಗ ಸೊರಕೆಯಲ್ಲಿ ಕಾಣಿಸಿಕೊಂಡಿದೆ.

ಸೊರಕೆ, ನೆರೋಲ್ತಡ್ಕ ಸಮೀಪದ ತೋಟವೊಂದರ ಬಳಿ ಎರಡು ಕಾಡಾನೆಗಳು ಇದೆ ಎನ್ನುವ ಮಾಹಿತಿ ಲಭ್ಯವಾಗಿದ್ದು ವಿಷಯ ತಿಳಿದ ಅರಣ್ಯ ಇಲಾಖೆಯವರು ಸ್ಥಳಕ್ಕೆ ಹೋಗುತ್ತಿದ್ದಾರೆ ಎನ್ನಲಾಗಿದೆ. ಕೆಲವು ದಿನಗಳಿಂದ ಪುಣ್ಚಪ್ಪಾಡಿ, ವೀರಮಂಗಳ, ಶಾಂತಿಗೋಡು, ಬೆಳ್ಳಿಪ್ಪಾಡಿ ಪರಿಸರದಲ್ಲಿ ಸುತ್ತಾಡುತ್ತಿದ್ದ ಕಾಡಾನೆಗಳನ್ನು ವಾಪಸ್ ಕಾಡಿಗೆ ಅಟ್ಟಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.