ಸುಧಾಕರ್ ಗೆದ್ದರೆ ರಾಜೀನಾಮೆ ನೀಡುತ್ತೇನೆ ಎಂದಿದ್ದ ಶಾಸಕ ಪ್ರದೀಪ್ ಈಶ್ವರ್ ಈಗ ಹೇಳುತ್ತಿರುವುದೇನು..?
ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಅವರ ಪರವಾಗಿ ಜನಾಭಿಪ್ರಾಯ ಬಂದಿದ್ದು ನಾನು ಅದನ್ನು ಗೌರವಿಸುತ್ತೇನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜೀನಾಮೆ ನೀಡುವುದಾಗಿ ಹೇಳಿದ್ದು ನಿಜ ಆದರೆ ನನ್ನ ಸವಾಲನ್ನು ಅವರು ಸ್ವೀಕಾರ ಮಾಡಿಲ್ಲ. ಹಾಗಾಗಿ ನಾನು ರಾಜೀನಾಮೆ ನೀಡುವ ಪ್ರಶ್ನೆ ಬರುವುದಿಲ್ಲ ಎಂದರು. ಲೋಕಸಭಾ ಚುನಾವಣೆಯಲ್ಲಿ ನಾನೇ ಇದ್ದಿದ್ದರೆ ಗೇಮ್ ಪ್ಲಾನ್ ಬೇರೆ ರೀತಿ ಇರುತ್ತಿತ್ತು ಎಂದು ಪ್ರದೀಪ್ ಈಶ್ವರ್ ಹೇಳಿದರು.