ಶಾಸಕ ಸ್ಥಾನಕ್ಕೆ ಇಂದು ಕುಮಾರಸ್ವಾಮಿ ರಾಜೀನಾಮೆ
ಕೇಂದ್ರದ ನೂತನ ಎನ್.ಡಿ.ಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಶನಿವಾರ ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿರುವ ಅವರು, ಅಲ್ಲಿಂದ ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.