ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಿಂದ ಸ್ಪರ್ಧಿಸಿ, ಸಂಸದರಾಗಿರುವ ಬೊಮ್ಮಾಯಿಯವರು ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.