ಕರಾವಳಿಕ್ರೈಂ

ಭಕ್ತಕೋಡಿ ವಿವಾಹಿತ ಮಹಿಳೆ ನಾಪತ್ತೆ

ಪುತ್ತೂರು : ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪುತ್ತೂರು ತಾಲೂಕು ಸರ್ವೆ ಗ್ರಾಮದ ಕಲ್ಲಗುಡ್ಡೆ, ಭಕ್ತಕೋಡಿಯ ಹರೀಶ (28) ರವರ ಪತ್ನಿ ದೀಪಿಕಾ(23) ನಾಪತ್ತೆಯಾದವರು. ಪತಿ ಹರೀಶ್‌ರವರು ನೀಡಿದ ದೂರಿನಲ್ಲಿ ತನ್ನ ಪತ್ನಿ ತಾನು ಕಟ್ಟಿದ ತಾಳಿಯನ್ನು ಮನೆಯಲ್ಲಿ ಬಿಚ್ಚಿಟ್ಟು ಜೂ. 13ರಂದು ಬೆಳಿಗ್ಗೆ 05 ಗಂಟೆಗೆ ಮನೆಯಿಂದ ಹೋದವಳು ನಾಪತ್ತೆಯಾಗಿರುತ್ತಾಳೆ. ಮನೆಯ ಸುತ್ತಮುತ್ತ ಪರಿಸರದಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡಿಕಾಡಿದರೂ ಇಲ್ಲಿವರೆಗೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!