ತೈಲ ಬೆಲೆ ಏರಿಕೆ: ಹೆಚ್ ಡಿ ಕೆ ಆಕ್ರೋಶ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಮದ್ಯ ಮಾರಾಟದಲ್ಲಿ ಬೆಲೆ ಏರಿಕೆ ಮಾಡಿ ಆಗಿದೆ, 5 ಗ್ಯಾರಂಟಿಗಾಗಿ ಹೆಚ್ಚಳ ಮಾಡಿದ್ದಾರೆ. ಈಗ ಬಡವರ ಜೇಬಿಗೆ ಕೈ ಹಾಕುತ್ತಿದ್ದಾರೆ. ಇದು ಜನ ಸಾಮಾನ್ಯರ ವಿರೋಧಿ ಸರ್ಕಾರ. ಬಡವರ ಕಿಸೆಗೆ ಕೈ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.