ರಾಷ್ಟ್ರೀಯ

ದೇಶದಾದ್ಯಂತ: ಬಕ್ರೀದ್ ಸಂಭ್ರಮ; ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟು ಮತ್ತಷ್ಟು ಗಟ್ಟಿಗೊಳ್ಳಲಿ-ಪ್ರಧಾನಿ ಮೋದಿ

ನವದೆಹಲಿ: ತ್ಯಾಗದ ಸಂದೇಶ ಸಾರುವ ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.

ಈ ಪವಿತ್ರ ಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.

ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ. ಎಲ್ಲರೂ ಸಂತೋಷದಿಂದ ಮತ್ತು ಆರೋಗ್ಯವಾಗಿರಲಿ.ಈದ್ ಮುಬಾರಕ್ ಎಂದು ಮೂಲಕ ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!