ಸುಳ್ಯ: ಶಾಲಾ ಜಗಲಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ದಲ್ಲಿ ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯ ವಯಸ್ಸು ಸುಮಾರು 25-30 ವರ್ಷ ಎಂದು ಅಂದಾಜಿಸಲಾಗಿದ್ದು ಸುಳ್ಯ ಪೋಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸುತಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಬೆಳ್ಳಾರೆಯಲ್ಲಿಯೂ ಕೂಡ ಇದೇ ರೀತಿ ಮಹಿಳೆಯನ್ನು ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದ ಘಟನೆ ನಡೆದಿದ್ದು ಇದಕ್ಕೆ ಸಂಬಂಧಪಟ್ಟ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಇದೀಗ ಮತ್ತೆ ಅದೇ ರೀತಿಯ ಘಟನೆ ನಡೆದಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಪೊಲೀಸರ ತನಿಖೆಯಿಂದ ಘಟನೆಯ ಪೂರ್ಣ ಮಾಹಿತಿ ತಿಳಿಯಲಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.