ಜೆಡಿಎಸ್ ಮತ್ತು ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲು ಇವಿಎಂ ಕಾರಣ: ಡಿ.ಕೆ ಶಿವಕುಮಾರ್
ಇವಿಎಂ ಕಾರಣದಿಂದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ ಮೂರರಲ್ಲಿ ಎರಡು ಭಾಗದಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬೀಳುತ್ತಿದ್ದವು. ಇವಿಎಂ ಕಾರಣಕ್ಕೆ ಈಗ ಪರಿಸ್ಥಿತಿ ಬದಲಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದರು. ಇವಿಎಂ ತೊಲಗಬೇಕು ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಬಂದಾಗಿದೆ. ಈಗೇನೂ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.